Featured Post

KCET 2024 Physics Keyanswer | Karnataka cet 2024 Keyanswer

ಇಮೇಜ್
KCET 2024 Physics Keyanswer | Karnataka cet 2024 Keyanswer  To download PDF  click here to download

NEET JEE ಪರೀಕ್ಷೆ ಸೆಪ್ಟೆಂಬರನಲ್ಲಿ, ಸುಪ್ರೀಂಕೋರ್ಟ್ ಹೇಳಿದೆ.

 NEET JEE ಪರೀಕ್ಷೆ ಸೆಪ್ಟೆಂಬರನಲ್ಲಿ, ಸುಪ್ರೀಂಕೋರ್ಟ್ ಹೇಳಿದೆ.


ನವದೆಹಲಿ;

ಎಂಜಿನಿಯರಿಂಗ್‌ ಮತ್ತು ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ರಾಷ್ಟ್ರಮಟ್ಟದಲ್ಲಿ ನಡೆಯುವ ಜಂಟಿ ಪ್ರವೇಶ ಪರೀಕ್ಷೆ (JEE ) ಮತ್ತು ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆಗಳು (NEET‌) ನಿಗದಿತ ದಿನಗಳಂದು ನಡೆಯಲಿವೆ ಎಂದು ಸುಪ್ರೀಂ ಕೋರ್ಟ್‌ ಸೋಮವಾರ ತಿಳಿಸಿದೆ.


ಕೊರೊನಾ ವೈರಸ್‌ ಪರಿಣಾಮ ಹಿನ್ನಲೆ ನೀಟ್‌, ಜೆಇಇ ಪರೀಕ್ಷೆಗಳನ್ನು ಮುಂದೂಡುವಂತೆ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಸ್ವೀಕರಿಸಿಲ್ಲ.NEET ಮತ್ತು JEE  ಪರೀಕ್ಷೆ ಮುಂದೂಡುವಂತೆ 11 ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದರು, ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅರುಣ್‌ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠ ಪರೀಕ್ಷೆ ಮುಂದೂಡಲು ಸಾಧ್ಯವಿಲ್ ಲ ಎಂದು ನಿರಾಕರಿಸಿದ್ದಾರೆ.


ನಿಗದಿಯಂತೆ ಸೆಪ್ಟೆಂಬರ್‌ ತಿಂಗಳಲ್ಲಿ ನೀಟ್‌, ಜೆಇಇ ಪರೀಕ್ಷೆಗಳು ನಡೆಯಲಿವೆ ಎಂದು ತ್ರಿಸದಸ್ಯ ಪೀಠ ತಿಳಿಸಿದೆ. ಯುವ ಜನರ ಬದುಕನ್ನು ಕಷ್ಟಕ್ಕೆ ಸಿಲುಕಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್‌ ಅಭಿಪ್ರಾಯಪಟ್ಟಿದೆ.


ಕಾಮೆಂಟ್‌ಗಳು

ಕಾಮೆಂಟ್‌‌ ಪೋಸ್ಟ್‌ ಮಾಡಿ

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

Chemistry PUC II year Practical Viva questions ( Most important)