ಪೋಸ್ಟ್‌ಗಳು

ಆಗಸ್ಟ್, 2022 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

Featured Post

KEA KCET 2024 documents verification details | KCET offline documents verification

ಇಮೇಜ್
ಸಿಇಟಿ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಇಂಜಿನಿಯರಿಂಗ್, ಕೃಷಿ ವಿಜ್ಞಾನ ಸೇರಿ ವೃತ್ತಿಪರ ಕೋರ್ಸ್ ಪ್ರವೇಶಕ್ಕೆ ನಾಳೆಯಿಂದ ಆಫ್ಲೈನ್ ದಾಖಲೆ ಪರಿಶೀಲನೆ. ಇಂಜಿನಿಯರಿಂಗ್, ಕೃಷಿ ವಿಜ್ಞಾನ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ 2024ನೇ ಸಾಲಿನ ಯುಜಿ -ಸಿಇಟಿ ರ್ಯಾಂಕ್ ಪಡೆದ ಅಭ್ಯರ್ಥಿಗಳಆಫ್ ಲೈನ್ ದಾಖಲಾತಿ ಪರಿಶೀಲನೆ ಜೂ. 25ರಿಂದ 29ರವರೆಗೆ ನಡೆಯಲಿದೆ. ಮಲ್ಲೇಶ್ವರದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಚೇರಿಯಲ್ಲಿ ಆಫ್ಲೈನ್ ದಾಖಲಾತಿ ಪರಿಶೀಲನೆ ನಡೆಯಲಿದ್ದು, ಇಂಜಿನಿಯರಿಂಗ್, ಆರ್ಕಿಟೆಕ್ಚರ್, ಯೋಗ ಮತ್ತು ನ್ಯಾಚುರೋಪತಿ, ಪಶು ವೈದ್ಯಕೀಯ ಮತ್ತು ಸಂಶೋಧನೆ, ಕೃಷಿ ವಿಜ್ಞಾನ ಕೋರ್ಸ್ ಗಳು, ಬಿಎಸ್ಸಿ ನರ್ಸಿಂಗ್, ಬಿ ಫಾರ್ಮಾ, ಡಿ ಫಾರ್ಮಾ ಕೋರ್ಸುಗಳ ಪ್ರವೇಶಕ್ಕೆ ಅನ್ವಯವಾಗಲಿದೆ. ವಿದ್ಯಾರ್ಥಿಗಳ ರ್ಯಾಂಕ್ ಆಧರಿಸಿ ಅವರು ದಾಖಲಾತಿ ಪರಿಶೀಲನೆಗೆ ಹಾಜರಾಗಬೇಕಾದ ವೇಳಾಪಟ್ಟಿಯನ್ನು ಪ್ರಾತಿಕಾರದ ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದೆ. ಅಭ್ಯರ್ಥಿಗಳು ತಮ್ಮ ಅರ್ಹತೆಗೆ ಅನುಸಾರವಾಗಿ ಅವಶ್ಯಕತೆ ಇರುವ ಎಲ್ಲಾ ಮೂಲ ದಾಖಲಾತಿಗಳೊಂದಿಗೆ ಪ್ರಾಧಿಕಾರದ ಕಚೇರಿಗೆ ಹಾಜರಾಗಲು ತಿಳಿಸಲಾಗಿದೆ.

KCET ಡಾಕ್ಯುಮೆಂಟ್ಸ್ ವೆರಿಫಿಕೇಷನ್ ಮುಂದೂಡಕೆ|ಹೈ ಕೋರ್ಟ್ ತಿರ್ಪಿನ ಬಗ್ಗೆ ಮಾಹಿತಿ|ಕರ್ನಾಟಕ ಸಿಇಟಿ ವಿದ್ಯಾರ್ಥಿಗಳಿಗೆ ಮಾಹಿತಿ

ಇಮೇಜ್
2022 ನೇ ಸಾಲಿನಲ್ಲಿ ವೃತ್ತಿಪರ ಕೋರ್ಸ್ ಗಳ ಪ್ರವೇಶಾತಿಗೆ ಸಿಇಟಿ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಮಹತ್ವದ ಮಾಹಿತಿ ನೀಡಿದ್ದು, ಆಗಸ್ಟ್ 18 ರವರೆಗೆ ಕೌನ್ಸೆಲಿಂಗ್ ಪ್ರಕ್ರಿಯೆ ಆರಂಭಿಸುವುದಿಲ್ಲ ಎಂದು ಹೇಳಿದೆ. 2021-22 ನೇ ಸಾಲಿನ ಪಿಯು ಪರೀಕ್ಷೆಯಲ್ಲಿ ನಡೆದ ಅಂಕಗಳನ್ನು ಸಿಇಟಿಯಲ್ಲಿ ಪರಿಗಣಿಸದೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕ್ರಮ ಪ್ರಶ್ನಿಸಿ ಕೆಲವು ವಿದ್ಯಾರ್ಥಿಗಳು ಸಲ್ಲಿಸಿರುವ ರ್ಜಿಯ ಮುಂದಿನ ವಿಚಾರಣೆವರೆಗೆ 2022 ನೇ ಸಾಲಿನಲ್ಲಿ ವೃತ್ತಿಪರ ಕೋರ್ಸ್ ಗಳ ಪ್ರವೇಶಾತಿಗೆ ನೈಜ್ಯ ಕೌನ್ಸೆಲಿಂಗ್ ಪ್ರಕ್ರಿಯೆ ಆರಂಭಿಸುವುದಿಲ್ಲ ಎಂದು ರಾಜ್ಯ ಸರ್ಕಾರ ಹೈಕೋರ್ಟ್ ಗೆ ತಿಳಿಸಿದೆ. ವಿದ್ಯಾರ್ಥಿಗಳ ತಕರಾರು ಅರ್ಜಿಗಳನ್ನು ನ್ಯಾಯಮೂರ್ತಿ ಎಸ್.ಆರ್. ಕೃಷ್ಣಕುಮಾರ್ ಅವರ ನ್ಯಾಯಪೀಠ ವಿಚಾರಣೆ ನಡೆಸಿದೆ. ಕೆಇಎ ಪರ ಸರ್ಕಾರದ ಹೆಚ್ಚುವರಿ ಅಡ್ವೋಕೇಟ್ ಜನರಲ್ ಧ್ಯಾನ್ ಚಿನ್ನಪ್ಪ 2020 ನೇ ಸಾಲಿನಲ್ಲಿ ವೃತ್ತಿಪರ ಕೋರ್ಸ್ ಗಳ ಪ್ರವೇಶಾತಿಗೆ ನೈಜ ಕೌನ್ಸೆಲಿಂಗ್ ಪ್ರಕ್ರಿಯೆ ಇನ್ನೂ ಆರಂಭವಾಗಿಲ್ಲ. ಸದ್ಯ ದಾಖಲೆ ಪರಿಶೀಲನೆ ಪ್ರಕ್ರಿಯೆ ಆರಂಭಿಕ ಹಂತದಲ್ಲಿದೆ. ಈ ಅರ್ಜಿ ಕುರಿತ ಮುಂದಿನ ವಿಚಾರಣೆವರೆಗೆ ಕೆಇಎ ನೈಜಕೌನ್ಸೆಲಿಂಗ್ ಪ್ರಕ್ರಿಯೆ ಆರಂಭಿಸುವುದಿಲ್ಲ ಎಂದು ನ್ಯಾಯಪೀಠಕ್ಕೆ ಹೇಳಿದ್ದಾರೆ.